ಬ್ಲಾಗೆಂಬ ಸ್ನೇಹಕೂಟದ ಮಿತ್ರರೆಲ್ಲರಿಗೂ ನಮನಗಳು. ಮುಂದಿನ ಮೂರ್ನಾಲ್ಕು ವಾರಗಳು ನಿಮ್ಮೆಲ್ಲರಿಂದ ದೂರವಿರಬೇಕಾಗಿದೆ. ಕೆಲವು ಶುಭ ಕಾರ್ಯಗಳು ಮತ್ತು ವೈಯಕ್ತಿಕ ಕಾರ್ಯಕ್ರಮಗಳಲ್ಲಿ ನಾನು ಸಕ್ರಿಯವಾಗಿ ಪಾಲ್ಗೊಳ್ಳಲೇಬೇಕಾಗಿರುವುದರಿಂದ ಓದುವಿಕೆ ಮತ್ತು ಬರವಣಿಗೆಗೆ ತಾತ್ಕಾಲಿಕ ವಿರಾಮ ನೀಡಬೇಕಾಗಿದೆ. ಮತ್ತೆ ಬಂದು ನಿಮ್ಮೆಲ್ಲರ ಬರಹಗಳನ್ನು ಓದುವ ಕಾತುರವಿದೆ. ಇಲ್ಲಿಯವರೆವಿಗೂ ನನ್ನನ್ನು ಪ್ರೀತಿಯಿಂದ ಕರೆದುತಂದ ನಿಮ್ಮೆಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸಿ....ಮತ್ತೆ ಭೇಟಿಯಾಗುತ್ತೇನೆ ಎಂಬ ಆಶಯದೊಂದಿಗೆ ......ಬರುತ್ತೇನೆ.
ಎಲ್ಲರಿಗೂ ಧನ್ಯವಾದಗಳು.